ಹುಬ್ಬಳ್ಳಿ :ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಭಾನುವಾರ ನೀರುಪಾಲಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ಕಿರಣ ರಜಪೂತ(22) ಎಂದು ಗುರುತಿಸಲಾಗಿದೆ.
ನಿನ್ನೆ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯಕ್ಕೆ ಕಿರಣ ರಜಪೂತ ಮತ್ತು ಆತನ ಗೆಳೆಯರು ಪ್ರವಾಸಕ್ಕೆಂದು ಬಂದಿದ್ದರು. ಈ ಸಂದರ್ಭದಲ್ಲಿ ಜಲಾಶಯದ ದಡದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಕೊಚ್ಚಿ ಹೋದ ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ನಿನ್ನೆ ಕಾರ್ಯಾಚರಣೆ ನಡೆಸಿದ್ದರು. ಆದರೆ ನಿನ್ನೆ ಯುವಕನ ಮೃತದೇಹ ಪತ್ತೆಯಾಗಿರಲಿಲ್ಲ.