ಹುಬ್ಬಳ್ಳಿ: ಮುಕ್ತ ವ್ಯಾಪಾರ ಒಪ್ಪಂದಗಳು ಹಾಗೂ ಭಾರತ ಪ್ರಸ್ತಾಪದಲ್ಲಿರುವ ಆರ್ಸಿಇಪಿ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ) ಒಪ್ಪಂದದಿಂದ ಕೃಷಿ ವಲಯಕ್ಕೆ ಮತ್ತು ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿರುವವರಿಗೆ ಅಪಾಯ ತರುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯ ಮಾಡಿದರು.
ಕೇಂದ್ರದ ಮುಕ್ತ ವ್ಯಾಪಾರ ನೀತಿಗೆ ಎಸ್.ಆರ್. ಹಿರೇಮಠ ವಿರೋಧ - ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ
ಕೃಷಿ ವಲಯಕ್ಕೆ ಮತ್ತು ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿರುವವರಿಗೆ ಅಪಾಯ ತರುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕೆಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯ ಮಾಡಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದ ಬಗ್ಗೆ ಕೇಂದ್ರ ಸರ್ಕಾರ ಪಾರ್ಲಿಮೆಂಟ್ನಲ್ಲಿ ಸುದೀರ್ಘ ಚರ್ಚೆ ನಡೆಸಬೇಕು. ಅಲ್ಲದೇ ಸಾಮಾನ್ಯ ಜನರಿಗೆ ಹಾಗೂ ಹೈನುಗಾರಿಕೆಯನ್ನೇ ನಂಬಿಕೊಂಡು ಬದುಕುವ ರೈತರಿಗೆ ಅನುಕೂಲವಾಗುವ ಹಾಗೂ ಸಮಾಜದ ಪ್ರತಿಯೊಬ್ಬ ವ್ಯಕ್ತಿಗೆ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಮಾನವ ಅಭಿವೃದ್ಧಿ ಜೊತೆಗೆ ಪರಿಸರ ಸಂರಕ್ಷಣೆ ಕೆಲಸವನ್ನು ಸರ್ಕಾರ ಮಾಡಬೇಕೆಂದು ಆಗ್ರಹಿಸಿದರು.
ಇನ್ನು ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಹಾಗೂ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿದ್ದು, ಈ ವಿಚಾರದಲ್ಲಿ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಕೊಂಡಿದ್ದು ಸ್ವಾಗತಾರ್ಹ. ಇದರ ಮುಂದಿನ ತನಿಖೆಯನ್ನು ಕ್ರಮಬದ್ಧವಾಗಿ ಮಾಡಬೇಕೆಂದು ಒತ್ತಾಯಿಸಿದರು.