ಹುಬ್ಬಳ್ಳಿ: ಗಂಗಿವಾಳ ಗ್ರಾ.ಪಂ ಸದಸ್ಯ ದೀಪಕ್ ಪಟದಾರಿ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದೆ. ಈ ಹಿನ್ನೆಲೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಗೊಳಿಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಆಗಮಿಸಿರುವ ಅಧಿಕಾರಿಗಳು, ಮಾಹಿತಿ ಸಂಗ್ರಹ ಹಾಗೂ ಕೊಲೆಯ ತನಿಖೆ ನಡೆಸುತ್ತಿದ್ದಾರೆ.
ಕಳೆದ ಜುಲೈ 4ರಂದು ಗ್ರಾ.ಪಂ ಸದಸ್ಯ ದೀಪಕ್ ಪಟದಾರಿಯನ್ನು ,ಹುಬ್ಬಳ್ಳಿಯ ರಾಯನಾಳ ಬಳಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಪೊಲೀಸರ ಮೇಲೆ ಅನುಮಾನ ವ್ಯಕ್ತವಾಗಿತ್ತು. ಅಲ್ಲದೇ ಇದನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.