ಹುಬ್ಬಳ್ಳಿ : ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಈ ಬಾರಿ ಧಾರವಾಡ ನಗರದಲ್ಲಿ ಬರುವ ಜನವರಿ ಕೊನೆಯ ವಾರದಲ್ಲಿ ಆಯೋಜಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಸಹಕಾರ ನೀಡಲಿದೆ. ಅನುದಾನದ ಸಮರ್ಪಕ ಬಳಕೆಯಾಗಬೇಕು, ಕ್ರೀಡಾಪಟುಗಳಿಗೆ ಮೂಲಸೌಕರ್ಯ, ಉತ್ತಮ ವಸತಿ, ಊಟ, ಸಾರಿಗೆ ಸೌಕರ್ಯಗಳನ್ನು ಕಲ್ಪಿಸಲು ಯೋಜಿತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.
ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ.. ದೀಪಾ ಚೋಳನ್ - ಕೆಯುಐಡಿಎಫ್ಸಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಸಭೆ ಅದ್ಯಕ್ಷತೆ
ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಈ ಬಾರಿ ಧಾರವಾಡ ನಗರದಲ್ಲಿ ಬರುವ ಜನವರಿ ಕೊನೆಯ ವಾರದಲ್ಲಿ ಆಯೋಜಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಸಹಕಾರ ನೀಡಲಿದೆ. ಅನುದಾನದ ಸಮರ್ಪಕ ಬಳಕೆಯಾಗಬೇಕು,ಕ್ರೀಡಾಪಟುಗಳಿಗೆ ಮೂಲಸೌಕರ್ಯ, ಉತ್ತಮ ವಸತಿ, ಊಟ, ಸಾರಿಗೆ ಸೌಕರ್ಯಗಳನ್ನು ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.
ಕೆಯುಐಡಿಎಫ್ಸಿ ಸಭಾಂಗಣದಲ್ಲಿ ಇಂದು ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ರೀಡಾಕೂಟ ಆಯೋಜನೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರ ಸಂಘದ ಪದಾಧಿಕಾರಿಗಳು, ಸದಸ್ಯರನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಿ ಆಯೋಜನೆಗೆ ಕಾರ್ಯೋನ್ಮುಖರಾಗಬೇಕು. ನಿರಂತರವಾಗಿ ಸಭೆಗಳ ಮೂಲಕ ಸಿದ್ಧತಾ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಎಸ್.ಷಡಕ್ಷರಿ, ಧಾರವಾಡ ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್.ಸಿದ್ಧನಗೌಡರ್ ಸೇರಿ ಹಲವರು ಉಪಸ್ಥಿತರಿದ್ದರು.