ಕರ್ನಾಟಕ

karnataka

ETV Bharat / state

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಶೆಟ್ಟರ್​ಗೆ ಮನವಿ

ಎಸ್​ಎಸ್​ಎಲ್​ಸಿ, ಪಿಯು ಪರೀಕ್ಷೆಗಳು ಸಮೀಪಿಸುತ್ತಿವೆ. ಪದವಿ ಪರೀಕ್ಷೆ ಈಗಾಗಲೇ ಆರಂಭವಾಗಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ, ಸಾರ್ವಜನಿಕರ ಅನುಕೂಲಕ್ಕಾಗಿ ನೌಕರರ ಬೇಡಿಕೆ ಕೈಬಿಡಬೇಕು..

the-district-superintendent-appeals-to-shetter-to-fulfill-the-demand-of-the-transport-workers
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಶೆಟ್ಟರ್​ಗೆ ಮನವಿ

By

Published : Apr 16, 2021, 5:20 PM IST

ಹುಬ್ಬಳ್ಳಿ :ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನೌಕರರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

9 ದಿನಗಳಿಂದ ಕೆಎಸ್‌ಆರ್‌ಟಿಸಿ ನೌಕರರು 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಆದರೆ, ಈ ಬಗ್ಗೆ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೂಡಲೇ ತಮ್ಮ ಮುಷ್ಕರ ವಾಪಸ್ ಪಡೆಯಬೇಕು.

ಈ ಮುಷ್ಕರದಿಂದಾಗಿ ಪ್ರಯಾಣಿಕರಿಗೆ, ಅದರಲ್ಲೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ಸಂಸ್ಥೆ ಬಸ್‌ಗಳಿಲ್ಲದ ಕಾರಣ ಖಾಸಗಿ ಬಸ್ ಹಾಗೂ ಇತರೆ ವಾಹನಗಳ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡುತ್ತಿದ್ದಾರೆ ಎಂದರು.

ಹಾಗೆಯೇ, ಗ್ರಾಮಾಂತರ ಹಾಗೂ ಇತರೆ ಪ್ರದೇಶಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳು ದೈನಂದಿನ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ. ಈಗಾಗಲೇ ಕೋವಿಡ್ ಪರಿಣಾಮ ಶಾಲಾ–ಕಾಲೇಜುಗಳಲ್ಲಿ ತರಗತಿ ನಡೆಯುವುದು ತೀರಾ ವಿರಳ.

ಎಸ್​ಎಸ್​ಎಲ್​ಸಿ, ಪಿಯು ಪರೀಕ್ಷೆಗಳು ಸಮೀಪಿಸುತ್ತಿವೆ. ಪದವಿ ಪರೀಕ್ಷೆ ಈಗಾಗಲೇ ಆರಂಭವಾಗಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ, ಸಾರ್ವಜನಿಕರ ಅನುಕೂಲಕ್ಕಾಗಿ ನೌಕರರ ಬೇಡಿಕೆ ಕೈಬಿಡಬೇಕು ಎಂದರು.

ಓದಿ:ಇಂಧನ ದರದ ಹೊಡೆತ.. ಆರ್ಥಿಕ ಸಂಕಷ್ಟದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ..

ABOUT THE AUTHOR

...view details