ಧಾರವಾಡ: ಜಿಲ್ಲಾಧಿಕಾರಿ ಕಚೇರಿಗೆ ಕೆಲಸಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಶೌಚಾಲಯಕ್ಕೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಧಾರವಾಡ ಡಿಸಿ ಕಚೇರಿ ಆವರಣದಲ್ಲಿ ವ್ಯಕ್ತಿಯಿಂದ ಆತ್ಮಹತ್ಯೆ ಯತ್ನ - kannadanews
ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ಕೆಲಸಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಶೌಚಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ ಯತ್ನ
ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ದ್ಯಾಮಣ್ಣ ಮೇಟಿ ಎಂಬಾತ ಫಿನಾಯಿಲ್ ಕುಡಿದು ಎಡಗೈಯನ್ನು ಬ್ಲೇಡಿನಿಂದ ಕೊಯ್ದುಕೊಂಡಿದ್ದಾನೆ. ಕಚೇರಿಯ ಸಿಬ್ಬಂದಿಯೊಬ್ಬರು ಶೌಚಾಲಯಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಆಂಬುಲೆನ್ಸ್ಗೆ ಕರೆ ಮಾಡಿ ಅಸ್ವಸ್ಥನಾಗಿದ್ದ ದ್ಯಾಮಣ್ಣನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈತ ಇಂದು ಬೆಳಿಗ್ಗೆ ತನ್ನ ಕೆಲಸಕ್ಕೆಂದು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಎಂದು ಹೇಳಲಾಗಿದೆ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.