ನವಲಗುಂದ: ತಾಲೂಕಿನ ಶಿರಕೋಳ ಗ್ರಾಮದಿಂದ ಹಣಸಿ ಗ್ರಾಮಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಪ್ರವಾಹದ ರಭಸಕ್ಕೆ ಸಂಪೂರ್ಣ ಕೊಚ್ಚಿ ಹೋಗಿದ್ದು, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಪರಿಶೀಲನೆ ನಡೆಸಿದರು.
ಅತಿವೃಷ್ಟಿಯಿಂದ ಹಾಳಾದ ಶಿರಕೋಳ ರಸ್ತೆ ದುರಸ್ತಿಗೊಳಿಸುವಂತೆ ಶಾಸಕರಿಂದ ಸೂಚನೆ - legislator Shankarapatila Muneenakoppa
ನವಲಗುಂದ ತಾಲೂಕಿನ ಶಿರಕೋಳ ಗ್ರಾಮದಿಂದ ಹಣಸಿ ಗ್ರಾಮಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಪ್ರವಾಹದ ರಭಸಕ್ಕೆ ಸಂಪೂರ್ಣ ಕೊಚ್ಚಿ ಹೋಗಿದ್ದು, ಶಾಸಕ ಶಂಕರಪಾಟೀಲ ಮುನೇನಕೊಪ್ಪ ಪರಿಶೀಲನೆ ನಡೆಸಿದರು.
ನವಲಗುಂದ
ಹಾನಿಯಾದ ರಸ್ತೆಯನ್ನು ಶೀಘ್ರದಲ್ಲಿ ದುರಸ್ತಿಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಸ್ಥಳದಲ್ಲಿ ನೆರೆದಿದ್ದ ರೈತರಿಗೆ ಈ ಮಾರ್ಗದಲ್ಲಿ ಸಂಚರಿಸುವಾಗ ಎಚ್ಚರದಿಂದ ಇರುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ಶಿರಕೋಳ ಮತ್ತು ಹಣಸಿ ಗ್ರಾಮಸ್ಥರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.