ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ಪೊಲೀಸ್ ತನಿಖೆಗೆ ಸಂಬಂಧಿಸಿ ವಿಚಾರಣೆಗಾಗಿ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ ಹಾಗೂ ಇತರೆ ಐದು ಜನ ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದಾರೆ.
ಓದಿ:ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಕೋರ್ಟ್‌ಗೆ ಬರುವ ವೇಳೆ ಸುದ್ದಿಗಾರರೊಂದಿಗೆ ಬಸವರಾಜ ಮುತ್ತಗಿ ಮಾತನಾಡಿ, ಸಿಬಿಐ ತನಿಖೆ ವೇಳೆ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಗರೀಕರ್ ನನ್ನ ಕಾಲಿಗೆ ಬಿದ್ದ ವಿಚಾರ ಅದೆಲ್ಲವೂ ಸತ್ಯಕ್ಕೆ ದೂರವಾಗಿದೆ. ನಮ್ಮ ಪೊಲೀಸ್ ವ್ಯವಸ್ಥೆ ಅಷ್ಟೊಂದು ಹದಗೆಟ್ಟಿಲ್ಲ ಎಂದರು. ನಮ್ಮ ತಂದೆ ಸಹ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದವರು. ಆ ಇಲಾಖೆಯ ಉಪ್ಪು ತಿಂದು ನಾನು ಬೆಳೆದಿದ್ದೇನೆ ಎಂದರು.