ಧಾರವಾಡ:ಕೊರೊನಾ ಸೋಂಕಿನಿಂದ ಗುಣಮುಖವಾಗಿ ಕೋವಿಡ್ ಕೇರ್ ಸೆಂಟರ್‌ನಿಂದ ಬಿಡುಗಡೆಗೊಂಡ ಧಾರವಾಡದ ಉಪನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ಗೆ ಉಪನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ ಹೂಮಾಲೆ ಹಾಕಿ ಸನ್ಮಾನಿಸಿದರು.
ಗುಣಮುಖವಾಗಿ ಬಿಡುಗಡೆಗೊಂಡ ಹೆಡ್ ಕಾನ್ಸ್‌ಟೇಬಲ್ ಸ್ವಾಗತಿಸಿದ ಸಿಬ್ಬಂದಿ ಉಪನಗರ ಠಾಣೆಯ ತಾನಾಜಿ ಶಿಂಧೆ (52) ಕೋವಿಡ್ ಕೇರ್ ಸೆಂಟರ್‌ನಿಂದ ಬಿಡುಗಡೆಗೊಂಡ ಕಾನ್ಸ್‌ಟೇಬಲ್ ಆಗಿದ್ದಾರೆ. ಅವರಿಗೆ ಇಲಾಖೆಯ ಪೊಲೀಸ್ ಅಧಿಕಾರಿಗಳು ಹೂವಿನ ಹಾರ ಹಾಕಿ ಸನ್ಮಾನ ಮಾಡಿ ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ.
ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಬಳಿಕ ಸ್ವ್ಯಾಬ್ ಟೆಸ್ಟ್ ಮಾಡಿಸಿದ್ದು, ಕೊರೊನಾ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗೆಂದು ಅವರನ್ನು ಜುಲೈ 15ರಂದು ನಗರದ ಬಿ. ಡಿ. ಜತ್ತಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು.
ನಗರದ ಯು.ಬಿ.ಹಿಲ್ ಬಳಿಯ ಕೋವಿಡ್ ಕೇರ್ ಸೆಂಟರ್‌ನಿಂದ ಇಂದು ಬಿಡುಗಡೆಗೊಂಡ ಅವರನ್ನು ಮತ್ತೆ ಹೋಂ ಕ್ವಾರಂಟೈನ್ಗೆ ಕಳಿಸಲಾಯಿತು.