ಹುಬ್ಬಳ್ಳಿ:ನೆರೆ ಪರಿಹಾರ ವಿಚಾರದಲ್ಲಿ ಸರ್ಕಾರ ಕೈಗೊಂಡ ಪರಿಹಾರ ಕಾರ್ಯದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡುವುದಿಲ್ಲ. ನಮ್ಮ ಕಾರ್ಯಕರ್ತರು, ಮುಖಂಡರು ಸಹಾಯಹಸ್ತ ಚಾಚುವಂತೆ ಹೇಳಿದ್ದೇನೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ರು.
ರಾಜ್ಯದ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಡಿಕೆಶಿ ಒತ್ತಾಯ - kannadanews
ರಾಜ್ಯದ ಅತಿವೃಷ್ಟಿಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ಕುಂದಗೋಳ, ಹುಬ್ಬಳ್ಳಿ, ಬೈಲಹೊಂಗಲ, ಸೇರಿದಂತೆ ಇತರೆಡೆ ಪ್ರವಾಸ ಕೈಗೊಂಡಿದ್ದೇನೆ. 70 ವರ್ಷಗಳ ಇತಿಹಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜರೋಣ ಮಾಡುತ್ತಿದ್ದರು. ಆದ್ರೆ ಈ ಬಾರಿ ಸಚಿವರಿಲ್ಲದೆ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸ್ಥಿತಿ ಬಂದಿದೆ. ಅಧಿಕಾರಿಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಹೊರಟಿದ್ದಾರೆ. ಆಗಸ್ಟ್ 16 ನಂತರ ಸಂಪುಟ ರಚನೆ ಬಗ್ಗೆ ಮಾತನಾಡುತ್ತಾರಂತೆ. ಕೆಲವರು ಸಂತ್ರಸ್ತರಿಗೆ ನೆರವು ನೀಡುವ ಹೆಸರಲ್ಲಿ ಡಬ್ಬಿ ಹಿಡಿದು ಹೊರಟಿದ್ದಾರೆ. ಸಂತ್ರಸ್ತರ ಹೆಸರಲ್ಲಿ ವಸೂಲಿ ಮಾಡುವ ಕೆಲಸ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಗಮನ ಹರಿಸಬೇಕು ಎಂದ್ರು.
ಈಗಾಗಲೇ ಬೆಂಗಳೂರು ಸೇರಿದಂತೆ ಇತರಡೆ ದೇಣಿಗೆ ಸಂಗ್ರಹ ಆರಂಭವಾಗಿದೆ. ರಾಜ್ಯದ ಬಹುತೇಕ ಭಾಗ ಅತಿವೃಷ್ಟಿ ಉಂಟಾಗಿರುವುದರಿಂದ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಒತ್ತಾಯಿಸಿದ್ರು.