ಧಾರವಾಡ: ಹತ್ತು ತಿಂಗಳ ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ತನ್ವೀರ್ ಅಗಸಿಮನಿ ಮೃತ ಮಗುವಾಗಿದೆ.
ನಿನ್ನೆ, ಏಕಾಏಕಿ ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮಗು ಮೃತಪಟ್ಟಿದೆ. ಆದರೆ, ಮಗುವಿನ ಮೃತದೇಹದಿಂದ ವಿಷದ ವಾಸನೆ ಬರುತ್ತಿದೆ ಎನ್ನಲಾಗಿತ್ತು. ಮಗುವಿಗೆ ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗುತ್ತಿದ್ದು, ತಂದೆ - ತಾಯಿ ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ಮಾಡುತ್ತಿದ್ದಾರೆ.