ಕರ್ನಾಟಕ

karnataka

ETV Bharat / state

ಜ. 29ರಿಂದ ಫೆ. 15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ: ಸಚಿವ ಪ್ರಹ್ಲಾದ್ ಜೋಶಿ - Central Budget Session

ಜ. 29ರಿಂದ ಫೆ. 15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ. 1ರಂದು ಬಜೆಟ್​​ ವಿಸ್ತರಣೆ ಮಂಡಿಸಲಿದ್ದು, ಕರ್ನಾಟಕದ ಆದ್ಯತಾ ಪಟ್ಟಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ

By

Published : Jan 10, 2021, 3:09 PM IST

Updated : Jan 10, 2021, 3:14 PM IST

ಹುಬ್ಬಳ್ಳಿ: ಜ. 29ರಿಂದ ಫೆ. 15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ. 30ರಂದು ಸರ್ವಪಕ್ಷದ ಸಭೆ ನಡೆಯಲಿದೆ. ಮಾರ್ಚ್ 8ರಿಂದ ಏಪ್ರಿಲ್ 8ರವರೆಗೆ ಎರಡನೇ ಅಧಿವೇಶನ ನಡೆಯಲಿದೆ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ. 1ರಂದು ಬಜೆಟ್​​ ವಿಸ್ತರಣೆ ಮಂಡಿಸಲಿದ್ದು, ಕರ್ನಾಟಕದ ಆದ್ಯತಾ ಪಟ್ಟಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ರಾಜ್ಯ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿಗಳು ಮತ್ತು ರಾಷ್ಟ್ರೀಯ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಯಾವಾಗ ಸಂಪುಟ ವಿಸ್ತರಣೆ ಮಾಡಬೇಕು ಎಂಬುದು ವರಿಷ್ಠರಿಗೆ ಗೊತ್ತಿದೆ ಎಂದರು.

ಓದಿ:ಹೈಕಮಾಂಡ್​ ಭೇಟಿಗೆ ದೆಹಲಿಗೆ ಬಂದಿಳಿದ ಸಿಎಂ ಬಿಎಸ್​ವೈ

ಕೋವಿಡ್ ವ್ಯಾಕ್ಸಿನ್​ ಮೊದಲು ಪ್ರಧಾನಿ ಹಾಗೂ ಸಚಿವರು ತೆಗೆದುಕೊಳ್ಳಬೇಕು ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸುವುದು ಬೇಡ. ಅಲ್ಲದೆ ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡ ಎಂದರು.

ಜನವರಿ 16 ಹಾಗೂ 17ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಜ. 17ರಂದು ಬೆಳಗಾವಿಯಲ್ಲಿ ನಡೆಯಲಿರುವ ಜನಸೇವಕ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Last Updated : Jan 10, 2021, 3:14 PM IST

ABOUT THE AUTHOR

...view details