ಹುಬ್ಬಳ್ಳಿ: ಯುವತಿವೋರ್ವಳನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯಲ್ಲಿ ನಿರ್ಜನ ಪ್ರದೇಶಕ್ಕೆ ಕರೆದ್ಯೊಯ್ದು ಯುವತಿ ಮೇಲೆ ಅತ್ಯಾಚಾರ - ಅತ್ಯಾಚಾರ
ಶನಿವಾರ ರಾತ್ರಿ ಮನೆಗೆ ಹೋಗುತ್ತಿದ್ದ ಯುವತಿವೋರ್ವಳನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಅತ್ಯಾಚಾರ
ಸುಮಾರು 20 ವರ್ಷದ ಯುವತಿಯೊಬ್ಬಳು ಶನಿವಾರ ರಾತ್ರಿ ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಆಟೋದಲ್ಲಿ ಬಂದ ಇರ್ಫನ್ ಹಾಗೂ ಆತನ ಗೆಳೆಯ ಮಹ್ಮದ್ ಗೌಸ್ ಎಂಬ ಆರೋಪಿಗಳು ಅವಳನ್ನು ಹಿಂಬಾಲಿಸಿ ಮನೆಗೆ ಬಿಡುವುದಾಗಿ ಒತ್ತಾಯಪೂರ್ಕವಾಗಿ ಆಟೋದಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ.
ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.