ಹುಬ್ಬಳ್ಳಿ :ಜನನ, ಮರಣ ಪ್ರಮಾಣ ಪತ್ರ ಪಡೆಯಲು ಜನ ನಿತ್ಯ ಪಾಲಿಕೆಯ ವಲಯ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಮಾತ್ರ ಪ್ರಮಾಣ ಪತ್ರ ನೀಡಲು ಕಾಗದವೇ ಇಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರಂತೆ. ಇಂತಹ ಒಂದು ಆರೋಪವನ್ನ ಸ್ಥಳೀಯರ ಪಾಲಿಕೆ ಅಧಿಕಾರಿಗಳ ವಿರುದ್ಧ ಮಾಡುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಲ್ಲ ವಲಯ ಕಚೇರಿಗಳಲ್ಲೂ ಜನನ-ಮರಣ ಪ್ರಮಾಣ ಪತ್ರ ನೀಡಲಾಗುತ್ತೆ. ಆದರೆ, ಕಳೆದೊಂದು ತಿಂಗಳಿನಿಂದ ಪ್ರಮಾಣ ಪತ್ರ ಒದಗಿಸಲು ಸರ್ಕಾರದಿಂದ ಬರಬೇಕಾದ ಕಾಗದ ಪೊರೈಕೆ ಸ್ಥಗಿತವಾಗಿದೆ. ಹಾಗಾಗಿ, ಸಾರ್ವಜನಿಕರು ಪಾಲಿಕೆ ಕಚೇರಿಗಳಿಗೆ ಅಲೆಯಬೇಕಾದ ಅನಿವಾರ್ಯತೆ ಎದುರಾಗಿದೆ.