ಕರ್ನಾಟಕ

karnataka

ETV Bharat / state

ಸಿಎಂ ಸ್ಥಾನಕ್ಕೆ ಶೆಟ್ಟರ್ ಹೆಸರು ಮುನ್ನೆಲೆಗೆ ತಂದವರಾರು ಗೊತ್ತಿಲ್ಲ: ಪ್ರಹ್ಲಾದ್ ಜೋಶಿ - ಸಿಎಂ ವಿಚಾರದಲ್ಲಿ ಶೆಟ್ಟರ್ ಹೆಸರು ಮುನ್ನೆಲೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಷ್ಟ್ರೀಯ ನಾಯಕತ್ವದಲ್ಲಿಯೂ ಯಾವುದೇ ಚರ್ಚೆ ಆಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

there-is-no-proposal-of-cm-change-in-karnataka-says-union-minister-pralhad-joshi
ಸಿಎಂ ವಿಚಾರದಲ್ಲಿ ಶೆಟ್ಟರ್ ಹೆಸರು ಮುನ್ನೆಲೆಗೆ ಯಾರು ತಂದಿದ್ದಾರೆ ಗೊತ್ತಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

By

Published : Aug 12, 2022, 4:38 PM IST

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಪ್ರಸ್ತಾಪ ಇಲ್ಲ. ಈ ಬಗ್ಗೆ ರಾಷ್ಟ್ರೀಯ ನಾಯಕತ್ವದಲ್ಲಿಯೂ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರದಲ್ಲಿ ಜಗದೀಶ ಶೆಟ್ಟರ್ ಹೆಸರನ್ನು ಯಾರು ಮುನ್ನೆಲೆಗೆ ತಂದಿದ್ದಾರೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಸಿಎಂ ವಿಚಾರದಲ್ಲಿ ಶೆಟ್ಟರ್ ಹೆಸರು ಮುನ್ನೆಲೆಗೆ ಯಾರು ತಂದಿದ್ದಾರೆ ಗೊತ್ತಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಮಹಾನಗರ ಪಾಲಿಕೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಲೋಪವಾದ ಧ್ವಜಗಳನ್ನು ಪರಿಶೀಲನೆ ಮಾಡದೇ ಸ್ವೀಕಾರ ಮಾಡಲಾಗಿದೆ.‌ ತಪ್ಪೆಸಗಿರುವವರ ವಿರುದ್ಧ ಕಟ್ಟುನಿಟ್ಟಿನ‌ ಕ್ರಮ‌ ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗಾಗಿ ಹಿಂದೂ ಸಂಘಟನೆಗಳ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಈದ್ಗಾ ಮೈದಾನ ಪಾಲಿಕೆ ವ್ಯಾಪ್ತಿಯಲ್ಲಿದೆ. ಈ ವಿಚಾರದಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸ್ವತಂತ್ರ ಅಧಿಕಾರ ಇದೆ. ಇದರ ಬಗ್ಗೆ ಅವರೇನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅವರಿಗೆ ಬಿಟ್ಟ ವಿಚಾರ. ಧಾರ್ಮಿಕ ಆಚರಣೆ ವಿಚಾರವಾಗಿ ಸುಪ್ರೀಂ‌ ಕೋರ್ಟ್​​ನಿಂದಲೇ ಆದೇಶವಿದೆ. ಹೀಗಾಗಿ ಈ ಬಗ್ಗೆ ಪಾಲಿಕೆ ಅಧಿಕಾರಿಗಳು ನಿರ್ಧರಿಸುತ್ತಾರೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ: ಜಗದೀಶ್ ಶೆಟ್ಟರ್

ABOUT THE AUTHOR

...view details