ಹುಬ್ಬಳ್ಳಿ: ವಿಧವೆಗೆ ವಂಚಿಸಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಅಶೋಕನಗರ ಪೊಲೀಸ್ ಠಾಣೆಯ 17 ಜನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೂ ಕೂಡ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಿಲ್ಲ ಎನ್ನಲಾಗಿದೆ.
ವಿಧವೆಗೆ ವಂಚಿಸಿದ್ದ ಆರೋಪಿಗೆ ಕೊರೊನಾ... ಹುಬ್ಬಳ್ಳಿ ಅಶೋಕನಗರ ಠಾಣೆಯ 17 ಸಿಬ್ಬಂದಿ ಕ್ವಾರಂಟೈನ್ - police station sealdown
ವಿಧವೆಗೆ ವಂಚಿಸಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ 17 ಜನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಅಶೋಕನಗರ ಠಾಣೆ
ಹು-ಧಾ ಮಹಾನಗರ ಪಾಲಿಕೆ ಹಾಗೂ ತಾಲೂಕು ಆಡಳಿತದ ನಿಷ್ಕಾಳಜಿಯಿಂದ ಅಶೋಕನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿಲ್ಲ ಎನ್ನಲಾಗುತ್ತಿದೆ. ಇದೀಗ ಸಿಬ್ಬಂದಿ ಠಾಣೆಯ ಹೊರಗಡೆಯೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.