ಹುಬ್ಬಳ್ಳಿ :ಟಿಕೆಟ್ ತಪ್ಪಿದಾಗ ಜಗದೀಶ್ ಶೆಟ್ಟರ್ ಬೇಸರದಿಂದ ಏನದಾರೂ ಎರಡು ಹೇಳಿಕೆ ಕೊಟ್ಟು ಸುಮ್ಮನೆ ಆಗುತ್ತಾರೆ. ಶೆಟ್ಟರ್ನನ್ನು ಮೂಲೆ ಗುಂಪು ಮಾಡಿ ಬೀಡೋಣ ಎಂದು ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿದ್ದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಜನರಲ್ಲಿ ಶೆಟ್ಟರ್ ಮುಖ ನೋಡಿ ವೋಟ್ ಹಾಕುವ ಭಾವನೆ ಬರುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಚಾಲೆಂಜ್ ಅನ್ನು ಜನರೇ ಸ್ವೀಕರಿಸುತ್ತಿದ್ದಾರೆ. ಎಲ್ಲರೂ ನಮ್ಮನ್ನು ಗೆಲ್ಲಿಸಿ ಅಂತಾ ಕ್ಯಾಂಪೇನ್ ಮಾಡಿದರೇ, ಬಿಜೆಪಿಯವರು ಶೆಟ್ಟರ್ ಸೋಲಿಸಿ ಎಂದು ಕ್ಯಾಂಪೇನ್ ಮಾಡುತ್ತಿದ್ದಾರೆ ಎಂದು ಬಿಜೆಪಿಯವರಿಗೆ ಟಾಂಗ್ ಕೊಟ್ಟರು.
ಜಗದೀಶ್ ಶೆಟ್ಟರ್ ಬಗ್ಗೆ ಜನರಲ್ಲಿ ಸಿಂಪಥಿ ಕ್ರಿಯೇಟ್ ಆಗಿದೆ. ನಾನು ಪಕ್ಷ ಬಿಟ್ಟು ಹೊರಗೆ ಹೋದಮೇಲೆ ಶೆಟ್ಟರ್ ಶಕ್ತಿ ಏನಂತಾ ಬಿಜೆಪಿಗೆ ಗೊತ್ತಾಗಿದೆ. ಹೀಗಾಗಿ ಅವರಿಗೆ ತಳಮಳ ಶುರುವಾಗಿದೆ. ಕ್ಷೇತ್ರದಲ್ಲಿ ಪ್ರತಿದಿನ ಒಬ್ಬಬರು ಬಂದು ಪ್ರಚಾರ ಮಾಡಿ, ಸುತ್ತಾಡಿ ಹೋಗುತ್ತಿದ್ದು, ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಚಿಂತೆಯಿಲ್ಲ, ಕೇವಲ ಶೆಟ್ಟರ್ ಒಬ್ಬರನ್ನು ಸೋಲಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಜೋಶಿ ವಿರುದ್ದ ಶೆಟ್ಟರ್ ವಾಗ್ದಾಳಿ : ಕೇಂದ್ರ ಮಂತ್ರಿಗಳು ಎಲ್ಲ ಕಾರ್ಪೋರೇಟರ್‌ಗಳ ಮೇಲೆ ನಿಗಾ ಇಟ್ಟಿದ್ದಾರೆ. ಪ್ರತಿ ಚಲನವಲನದ ಮೇಲೆ ನಿಗಾ ಇಟ್ಟು ಕಾಯುತ್ತಿದ್ದಾರೆ. ನಮ್ಮ ಬೆಂಬಲಿಗರಿಗೆ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿ ಮಾತ್ರವಲ್ಲಾ, ಕಾಂಗ್ರೆಸ್ ಕಾರ್ಪೊರೇಟರ್‌ಗಳಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.