ವಿಮಾನ ಸೇವೆ ಆರಂಭ: ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ - ಹುಬ್ಬಳ್ಳಿ -ಬೆಂಗಳೂರು ಮತ್ತು ಹುಬ್ಬಳ್ಳಿ -ದೆಹಲಿ ನಡುವೆ ವಿಮಾನ ಹಾರಾಟ
ಪ್ರತಿಯೊಬ್ಬ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ನೂರಾರು ಪ್ರಯಾಣಿಕರು ಕ್ಯೂ ನಿಂತಿದ್ದಾರೆ. ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಮಾಡಿ ಒಳಗಡೆ ಬಿಡಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್..
ಹುಬ್ಬಳ್ಳಿ: ದೇಶೀಯ ವಿಮಾನ ಹಾರಾಟಕ್ಕೆ ಅನುಮತಿ ನೀಡಿದ ಹಿನ್ನೆಲೆ ನೂರಾರು ಜನರು ಪ್ರಯಾಣ ಬೆಳೆಸಲು ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ.