ಹುಬ್ಬಳ್ಳಿ :ಬಟ್ಟೆ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹುಬ್ಬಳ್ಳಿಯ ಉಪನಗರ ಪೊಲೀಸರು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿರುವ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಹಿರಿಯ ಅಧಿಕಾರಿಗಳು, ಇನ್ಸ್‌ಪೆಕ್ಟರ್ ರವಿಚಂದ್ರ ಡಿ. ಬಡಪಕ್ಕೀರಪ್ಪನವರ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿ ನೇತೃತ್ವದ ತಂಡವನ್ನು ರಚನೆ ಮಾಡಿದ್ದರು.
ದಿನಾಂಕ 25/02/2021ರಂದು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಬಟ್ಟೆಯ ಅಂಗಡಿಗೆ ಹಾಕಿದ ಸೆಟರ್ಸ್ ಕೀಲಿ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲಾಗಿದೆ.
ಪೈರೋಜ್ ಜಪ್ರಿ ಬಂಧಿತ ಆರೋಪಿ. ಮೂಲತಃ ಶಿವಮೊಗ್ಗ ಮೂಲದವನಾದ ಈತನನ್ನು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿ 4,150 ರೂ. ಹಣ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಇದನ್ನೂ ಓದಿ:ಬಾಯ್ಫ್ರೆಂಡ್ನೊಂದಿಗೆ ಆಟೋದಲ್ಲಿ ಗಲಾಟೆ : ಕೆಳಗುರುಳಿದ ಯುವತಿ ಸಾವು