ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಚಾಕುವಿನಿಂದ ಇರಿದು ಹಣ, ಮೊಬೈಲ್ ಫೋನ್ ಸುಲಿಗೆ ಮಾಡಿದ್ದ ಆರೋಪಿ ಹಾಗೂ ಅಪ್ತಾಪ್ತ ಬಾಲಕನೊಬ್ಬನನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಹಳೆ ಹುಬ್ಬಳ್ಳಿ ನೂರಾನಿ ಗೌಂಡ್ ನಿವಾಸಿ ಮೊಹಮ್ಮದ್ ರಫೀಕ್ ಅಲಿಯಾಸ್ ಕಲಾ ಅಬುಲ್ ರಜಾಕ್ ಮುಲ್ಲಾ (25) ಬಂಧಿತ ಆರೋಪಿ. ಫೆ. 23ರಂದು ರಾತ್ರಿ ಬೆಳಗಾವಿ-ಬೆಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಧಾರವಾಡದ ಆರ್.ಜೆ.ಬೆಟಸೂರ ಎಂಬುವವರಿಗೆ ಚಾಕುವಿನಿಂದ ಇರಿದಿದ್ದರು. ಬಳಿಕ ಹಣ, ಮೊಬೈಲ್ ಕಿತ್ತುಕೊಂಡು ಯಲವಿಗಿ ನಿಲ್ದಾಣದಲ್ಲಿ ಇಳಿದು ಪರಾರಿಯಾಗಿದ್ದರು.