ಕರ್ನಾಟಕ

karnataka

ETV Bharat / state

ಈ ಸರ್ಕಾರಕ್ಕೆ ಕಣ್ಣು ಕಿವಿ ಎರಡೂ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ - Hubli airport

ನಮ್ಮ ಕಾರ್ಯಕರ್ತರಿಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ ವಿಮಾಣ ನಿಲ್ದಾಣದಲ್ಲಿ ಮಾತನಾಡಿದ್ದಾರೆ.

ಸಿದ್ದರಾಮಯ್ಯ

By

Published : Sep 5, 2019, 10:52 AM IST

ಹುಬ್ಬಳ್ಳಿ :ಡಿಕೆಶಿ ಬಂಧನದ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆಗೂ ನಮ್ಮ ಕಾರ್ಯಕರ್ತರಿಗೂ ಸಂಬಂಧವಿಲ್ಲ. ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು ನಮ್ಮ ಕಾರ್ಯಕರ್ತರಲ್ಲ. ನಮ್ಮವರ ಪ್ರತಿಭಟನೆಯಲ್ಲಿ‌ ಕೆಲ‌ ಕಿಡಿಗೇಡಿಗಳು ಸೇರಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರಿಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ನೆರೆ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗಂಜಿ ಕೇಂದ್ರಗಳನ್ನು ಈಗಾಗಲೇ ಮುಚ್ಚಲಾಗಿದೆ. ಬೆಳೆ ಪರಿಹಾರ, ಮನೆ ಪರಿಹಾರ ಸಂತ್ರಸ್ಥರಿಗೆ ತಲುಪಿಲ್ಲ. ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿ ಎಂದು ಡಿಸಿಗಳಿಗೆ ಸೂಚಿಸಿದ್ದೆ, ಆದ್ರೇ ಅದು ಆಗಿಲ್ಲ. ಈ ಸರ್ಕಾರಕ್ಕೆ ಕಣ್ಣು ಕಿವಿ ಎರಡೂ ಇಲ್ಲ ಎಂದು ಕಿಡಿಕಾರಿದರು.

ಮಹಾರಾಷ್ಟ್ರ ಹಾಗೂ ಕರ್ನಾಟಕ ಸರ್ಕಾರ ಕೋಯ್ನಾದಿಂದ ನೀರು ಬಿಡುವ ವಿಚಾರದಲ್ಲಿ ಸಮನ್ವಯತೆ ಕೊರತೆ ಇದೆ. ಇದರಿಂದ ಕೃಷ್ಣಾ ನದಿ ತೀರದಲ್ಲಿ ಸಾಕಷ್ಟು ತೊಂದರೆಯಾಗುತ್ತಿದೆ ಎಂದರು.

ABOUT THE AUTHOR

...view details