ಹುಬ್ಬಳ್ಳಿ: ಎರಡು ಬೈಕ್ಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿ: ಎರಡು ಬೈಕ್ಗಳ ಮಧ್ಯೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು - Three dead in Bike accident in Hubballi
![ಹುಬ್ಬಳ್ಳಿ: ಎರಡು ಬೈಕ್ಗಳ ಮಧ್ಯೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು three-dead-in-bike-accident-in-hubballi](https://etvbharatimages.akamaized.net/etvbharat/prod-images/768-512-10738678-thumbnail-3x2-dd.jpg)
08:24 February 23
ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ಪ್ರಾಣಪಕ್ಷಿ ಹಾರಿಹೋಗಿದೆ.
ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ಅಪಘಾತ ಸಂಭವಿಸಿದೆ. ಎರಡು ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ, ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕರ ಗುರುತು ಪತ್ತೆಯಾಗಿಲ್ಲ. ಡಿಕ್ಕಿ ರಭಸಕ್ಕೆ ಬೈಕ್ಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ.
ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಕಲ್ಲು ಕ್ವಾರಿ ದುರಂತ: ಜಿಲೆಟಿನ್ ಸ್ಫೋಟದಿಂದ 6 ಜನ ದುರ್ಮರಣ