ಧಾರವಾಡ:ಹುಬ್ಬಳ್ಳಿಯ ಲೈಫ್ಲೈನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಐವರು ಸಾವನ್ನಪ್ಪಿದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ವಿಚಾರಣಾಧಿಕಾರಿಗಳನ್ನು ನೇಮಿಸಲಾಗಿದೆ.
ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಎಸ್.ಎಂ.ಹೊನಕೇರಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಬಿ.ನಿಂಬಣ್ಣವರ, ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ಎಸ್.ಹಿತ್ತಲಮನಿ ಸೇರಿ ಮೂವರು ಅಧಿಕಾರಿಗಳಿಗೆ ವಿಚಾರಣೆ ನಡೆಸಲು ಸೂಚಿಸಲಾಗಿದೆ.