ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವವಿದ್ಯಾಲಯದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಪವಾಸ ನಿರತ ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವ ವಿದ್ಯಾಲಯದ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸಲು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು, ಈ ನಿಟ್ಟಿನಲ್ಲಿ ಉಪವಾಸ ಧರಣಿ ಕುಳಿತ ವಿದ್ಯಾರ್ಥಿಗಳಲ್ಲಿ ಮೂವರು ಅಸ್ವಸ್ಥಗೊಂಡಿದ್ದಾರೆ.