ಹುಬ್ಬಳ್ಳಿ: ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ಹುಬ್ಬಳ್ಳಿಗೆ ಆಗಮನ ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದಲೈಲಾಮಾ ಅವರಿಗೆ ಧಾರವಾಡ ಜಿಲ್ಲಾಡಳಿತದಿಂದ ಸ್ವಾಗತ ಕೋರಲಾಯ್ತು. ನಂತರ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಕ್ಕೆ ತಲುಪಿಸುವ ವ್ಯವಸ್ಥೆ ಕಲ್ಪಿಸಿ, ಬೀಳ್ಕೊಡಲಾಯಿತು.
ಇಂದಿನಿಂದ ಡಿ.24 ರವರೆಗೆ ಮುಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಲೈಲಾಮಾ ತಮ್ಮ 12 ಜನ ಧಾರ್ಮಿಕ ಅನುಚರರೊಂದಿಗೆ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.