ಕರ್ನಾಟಕ

karnataka

ETV Bharat / state

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಟಿಕೆಟ್ ರಹಿತ ಪ್ರಯಾಣ: 13 ಲಕ್ಷ ರೂ‌. ದಂಡ ವಸೂಲಿ

ತನಿಖಾ ತಂಡಗಳು 13.24 ಲಕ್ಷ ರೂ. ದಂಡ ವಸೂಲಿ ಮಾಡಿವೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

By

Published : May 21, 2023, 8:34 PM IST

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುಬ್ಬಳ್ಳಿ :ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ವಾ ಕ ರ ಸಾ) ಸಂಸ್ಥೆಯ ತನಿಖಾ ತಂಡಗಳು ಈ ವರ್ಷ ಆರಂಭದ ಜನವರಿ ಯಿಂದ ಕಳೆದ ತಿಂಗಳ ಏಪ್ರಿಲ್ ಅವಧಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದರು. ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ 13,956 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದ್ದು ಅವರಿಂದ 13.24 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಎಚ್. ರಾಮನಗೌಡ ಅವರು ತಿಳಿಸಿದ್ದಾರೆ.

ವಾ ಕ ರ ಸಾ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬಾಗಲಕೋಟೆ, ಬೆಳಗಾವಿ,ಗದಗ,ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಗಳ 55 ಡಿಪೊಗಳಿಂದ 4445 ಬಸ್ಸುಗಳು ಸಂಚರಿಸುತ್ತಿದ್ದು, ನಿತ್ಯ 16 ರಿಂದ 17ಲಕ್ಷ ಜನರು ಪ್ರಯಾಣ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಆದಾಯ ಸೋರಿಕೆ ತಡೆಯಲು ಕೇಂದ್ರ ಕಚೇರಿ ಹಾಗೂ ಆಯಾ ವಿಭಾಗಗಳ ಮಟ್ಟದಲ್ಲಿ ತನಿಖಾ ತಂಡಗಳ ಕಾರ್ಯ ಚಟುವಟಿಕೆ ಚುರುಕುಗೊಳಿಸಲಾಗಿದೆ.

ಇದನ್ನೂ ಓದಿ :ಶ್ರೀ ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ದರ್ಶನ ಪಡೆದ ನೂತನ ಡಿಸಿಎಂ ಡಿ. ಕೆ. ಶಿವಕುಮಾರ್

ಈ ತಂಡಗಳು ಜನವರಿಯಿಂದ ಏಪ್ರಿಲ್ ಅವಧಿಯಲ್ಲಿ ತನಿಖಾ ತಂಡಗಳು 71,021 ತನಿಖೆಗಳನ್ನು ಮಾಡಿದ್ದು, ಅಧಿಕೃತ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ 13,956 ಪ್ರಯಾಣಿಕರನ್ನು ಪತ್ತೆ ಮಾಡಿದ್ದಾರೆ. 1,41,391 ರೂ. ಆದಾಯ ಸೋರಿಕೆ ಹಣ ಪತ್ತೆ ಮಾಡಲಾಗಿದೆ. ಟಿಕೆಟ್ ರಹಿತ ಪ್ರಯಾಣಿಕರಿಂದ ರೂ. 13,24,245 ರೂ. ದಂಡ ವಸೂಲು ಮಾಡಲಾಗಿದೆ.

ಇದನ್ನೂ ಓದಿ :ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರ ಗಾಯ.. ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಆರಗ ಜ್ಞಾನೇಂದ್ರ

ಕೇಂದ್ರ ಮೋಟಾರು ವಾಹನ ಕಾಯ್ದೆ ಪ್ರಕಾರ ಸಾರಿಗೆ ಬಸ್ಸುಗಳಲ್ಲಿ ಅಧಿಕೃತ ಟಿಕೆಟ್ ಪಡೆಯದೆ ಪ್ರಯಾಣ ಮಾಡುವುದು ಶಿಕ್ಷಾರ್ಹ ಅಪರಾಧ. ಅದಕ್ಕಾಗಿ ಪ್ರಯಾಣ ದರದ ಹತ್ತು ಪಟ್ಟು ಅಥವಾ ರೂ. 500ರ ವರೆಗೆ ಸ್ಥಳದಲ್ಲಿಯೇ ದಂಡ ನೀಡಬೇಕಾಗುತ್ತದೆ. ಹಾಗೂ ಇತರೆ ಪ್ರಯಾಣಿಕರ ಎದುರಿನಲ್ಲಿ ಅವಮಾನ, ಮುಜುಗರ ಎದುರಿಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಪ್ಪದೆ ಟಿಕೆಟ್ ಪಡೆದು ಪ್ರಯಾಣ ಮಾಡಬೇಕು ಎಂದು ಪ್ರಕಟಣೆಯಲ್ಲಿ ಎಚ್. ರಾಮನಗೌಡರ ಮನವಿ ಮಾಡಿದ್ದಾರೆ.

ಇದನ್ನೂ ಓದಿ :ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತಿರುವುದೇಕೆ? ಮಳೆ ಬಂದರೆ ಜನರು ಸಾಯಲೇಬೇಕೆ? : ಹೆಚ್​ಡಿಕೆ ಕಿಡಿ

ABOUT THE AUTHOR

...view details