ಹುಬ್ಬಳ್ಳಿ:ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ಸ್ಪೋಟ ಹಿನ್ನೆಲೆ ರಾಜ್ಯಾದ್ಯಂತ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಾಣಿ ರಾಜು ಅವರ ಸೂಚನೆ ಮೇರೆಗೆ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ಸ್ಪೋಟ : ರಾಜ್ಯಾದ್ಯಂತ ಕಟ್ಟೆಚ್ಚರ - box blast in railway station
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ಬಾಕ್ಸ್ ಸ್ಪೋಟಗೊಂಡ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ರೈಲ್ವೆ ನಿಲ್ದಾಣದಲ್ಲೂ ಭಾರಿ ಬಿಗಿ ಭದ್ರತೆ ವಹಿಸಿದ್ದು ಎಲ್ಲಾ ಪ್ರಯಾಣಿಕರನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ.
hbl
ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಭಾರಿ ಬಿಗಿ ಭದ್ರತೆ ವಹಿಸಿದ್ದು, ಎಲ್ಲಾ ಪ್ರಯಾಣಿಕರನ್ನು ತೀವ್ರ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ. ರೈಲ್ವೆ ನಿಲ್ದಾಣಕ್ಕೆ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಮತ್ತೊಂದೆಡೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ತೀವ್ರ ನಿಗಾ ಇಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಸದ್ಯ ಹುಬ್ಬಳಿಯಲ್ಲಿ ಅನುಮಾನಸ್ಪದ ಬಾಕ್ಸ್ ಸ್ಪೋಟ ಹಿನ್ನೆಲೆ, ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಅನ್ನೋ ದೃಷ್ಟಿಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.