ಕರ್ನಾಟಕ

karnataka

ETV Bharat / state

ಸರ್ಕಾರದ ಆದೇಶ ಉಲ್ಲಂಘಿಸಿ ಹು-ಧಾ ಮಹಾನಗರ ಪಾಲಿಕೆಯಲ್ಲಿ ಟಿಪ್ಪು ಜಯಂತಿ ಆಚರಣೆ - Etv Bharat Kannada

ಹುಬ್ಬಳ್ಳಿಯ ಮಹಾನಗರ ಪಾಲಿಕೆಯ ವಿರೋಧ ಪಕ್ಷ ನಾಯಕರ ಕಚೇರಿಯಲ್ಲಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಟಿಪ್ಪು ಜಯಂತಿ ಆಚರಣೆ ಮಾಡಲಾಗಿದೆ.

Kn_hbl
ವಿರೋಧ ಪಕ್ಷ ನಾಯಕರ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ

By

Published : Nov 10, 2022, 6:21 PM IST

ಹುಬ್ಬಳ್ಳಿ:ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ರದ್ದು ಪಡಿಸಿ, ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ಮಾಡಬಾರದು ಎಂದು ಆದೇಶ ಹೊರಡಿಸಿದೆ. ಆದರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿರೋಧ ಪಕ್ಷ ನಾಯಕರ ಕಚೇರಿಯಲ್ಲಿ ಆದೇಶ ಉಲ್ಲಂಘನೆ ಮಾಡಿ ಟಿಪ್ಪು ಜಯಂತಿ ಆಚರಣೆ ಮಾಡಲಾಗಿದೆ.

ರಾಜ್ಯದಲ್ಲಿ ಟಿಪ್ಪು ಜಯಂತಿ ನಿಷೇಧ ವಿವಾದ ಭುಗಿಲೆದ್ದ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿ ವಿವಾದಕ್ಕೆ ಮತ್ತಷ್ಟು ಪುಷ್ಟಿ ನೀಡುವ ಕೆಲಸ ಮಾಡಿದ್ದಾರೆ. ಬೆಳಗ್ಗೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಿದ ಬೆನ್ನಲ್ಲೇ, ಪಾಲಿಕೆಯ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲ ಅವರು ಮಧ್ಯಾಹ್ನ ತಮ್ಮ ಕಚೇರಿಯಲ್ಲಿ, ತಮ್ಮ ಪಕ್ಷದ ಸದಸ್ಯರು ಹಾಗೂ ಪಕ್ಷದ ಮುಖಂಡರೊಂದಿಗೆ ಜಯಂತಿ ಆಚರಿಸಿದ್ದಾರೆ ಎನ್ನಲಾಗ್ತಿದೆ.

ಟಿಪ್ಪು ಚಿತ್ರಕ್ಕೆ ಪೂಜೆ ಸಲ್ಲಿಸಿದ ಮುಖಂಡರು, ಟಿಪ್ಪು ಪರ ಘೋಷಣೆಗಳನ್ನು ಕೂಗಿ ನಂತರ, ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ ಮಾತನಾಡಿ, ಮೈಸೂರು ಹುಲಿ ಎಂದೇ ಟಿಪ್ಪು ಅವರನ್ನು ಕರೆಯಲಾಗುತ್ತದೆ. ಬ್ರಿಟಿಷರ ವಿರುದ್ಧ ಹೋರಾಡಲು ತಮ್ಮ ಮಕ್ಕಳನ್ನು ಒತ್ತೆ ಇಟ್ಟ ರಾಜ ಅವರು. ಅವರ ಜಯಂತಿ ವಿರೋಧಿಸುವ ಸರ್ಕಾರ ಪಾಲಿಕೆ ಒಡೆತನದ ಈದ್ಗಾ ಮೈದಾನದಲ್ಲಿ ಜಯಂತಿ ಆಚರಣೆಗೆ ಅನುಮತಿ ಕೊಟ್ಟಿದೆ. ಎರಡು ತಿಂಗಳ ಹಿಂದೆ ಗಣೇಶೋತ್ಸವದ ಹೆಸರಿನಲ್ಲಿ ಮತ್ತು ಈಗ ಟಿಪ್ಪು ಜಯಂತಿ ಹೆಸರಿನಲ್ಲಿ ಬಿಜೆಪಿ ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ವಿರೋಧ ಪಕ್ಷ ನಾಯಕರ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ

ಈದ್ಗಾ ಮೈದಾನದ ಹೆಸರಿನಲ್ಲೇ ಬಿಜೆಪಿಯವರು ಇಲ್ಲಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಇಂತಹ ಕೀಳುಮಟ್ಟದ ರಾಜಕೀಯವನ್ನು ಜನ ಗಮನಿಸುತ್ತಿದ್ದಾರೆ. ಮುಂದೆ, ಅವರೇ ಬುದ್ಧಿ ಕಲಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಇನ್ಮುಂದೆ ಬಿಜೆಪಿ ನಾಯಕರ ವಿರುದ್ಧ ಮಾತನಾಡಲ್ಲ.. ಕಾಂಗ್ರೆಸ್, ಜೆಡಿಎಸ್ ನನ್ನ ಟಾರ್ಗೆಟ್: ಯತ್ನಾಳ್

ABOUT THE AUTHOR

...view details