ಹುಬ್ಬಳ್ಳಿ:ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟವಾಗಿದ್ದು, ಕ್ಷಣಮಾತ್ರದಲ್ಲಿ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ. ನಿನ್ನೆ ಸಂಜೆ ಕಣ್ಣೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಟೈರ್ ಬ್ಲಾಸ್ಟ್ ಆಗಿತ್ತು.
ಕಣ್ಣೂರಿನಿಂದ ಬೆಂಗಳೂರಿಗೆ ಹೊರಟಿದ್ದ ಈ ವಿಮಾನವು ಹುಬ್ಬಳ್ಳಿಯಿಂದ 18 ಪ್ರಯಾಣಿಕರನ್ನು ಕರೆದುಕೊಂಡು ಪ್ರಯಾಣ ಬೆಳೆಸಬೇಕಿತ್ತು. ಆದರೆ, ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಸುಮಾರು 200 ಮೀಟರ್ ಮುಂದೆ ಬಂದು ಲ್ಯಾಂಡ್ ಆಗಿದ್ದು ನೋಸ್ ಟೈರ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.