ಕರ್ನಾಟಕ

karnataka

ETV Bharat / state

ನವಲಗುಂದ, ಅಣ್ಣಿಗೇರಿ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ - ಜಿಲ್ಲಾಧಿಕಾರಿ ರಜೆ ಘೋಷಣೆ

ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಸುರಕ್ಷಿತ ಕ್ರಮವಾಗಿ ಎರಡು ತಾಲೂಕುಗಳಲ್ಲಿ ಮಾತ್ರ ಧಾರವಾಡ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

Heavy rain in Dharwada District
ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ

By

Published : Sep 6, 2022, 10:27 AM IST

ಧಾರವಾಡ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ಉಕ್ಕಿ ಹರಿಯುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು ಒಂದು ದಿನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ರೈತರು ಸಾರ್ವಜನಿಕರು ಹಳ್ಳ, ಕೊಳ್ಳಗಳನ್ನು ದಾಟುವ ಸಾಹಸಗಳಿಗೆ ಕೈ ಹಾಕಬಾರದು. ಜಾನುವಾರುಗಳ ಸುರಕ್ಷತೆಗೂ ಎಚ್ಚರವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ABOUT THE AUTHOR

...view details