ಕರ್ನಾಟಕ

karnataka

ETV Bharat / state

ಇಂದಿನಿಂದ ರಸ್ತೆಗಿಳಿಯಲಿವೆ ಹುಬ್ಬಳ್ಳಿಯ ವಾಕರಸಾ ಸಂಸ್ಥೆ ಬಸ್​ಗಳು - Hubli

ಇಂದು ಬೆಳಗ್ಗೆಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯ ಎಲ್ಲ ಬಸ್ ಘಟಕಗಳು ಹಾಗೂ ಬಸ್ ನಿಲ್ದಾಣಗಳಿಂದ ಬಸ್​​​​​ಗಳ ಸಂಚಾರವನ್ನು ಪುನಾರಂಭಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಹುಬ್ಬಳ್ಳಿಯ ವಾಕರಸಾ ಸಂಸ್ಥೆ ಬಸ್​ಗಳು
ಹುಬ್ಬಳ್ಳಿಯ ವಾಕರಸಾ ಸಂಸ್ಥೆ ಬಸ್​ಗಳು

By

Published : Jul 22, 2020, 9:23 AM IST

ಹುಬ್ಬಳ್ಳಿ:ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಲಾಕ್​ಡೌನ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಇಂದು ಬೆಳಗ್ಗೆಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯ ಎಲ್ಲ ಬಸ್ ಘಟಕಗಳು ಹಾಗೂ ಬಸ್ ನಿಲ್ದಾಣಗಳಿಂದ ಬಸ್​​​​ಗಳ ಸಂಚಾರವನ್ನು ಪುನರಾಂಭಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣ, ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ, ಕಲಘಟಗಿ, ಕುಂದಗೋಳ, ವಲಗುಂದ, ಅಣ್ಣಿಗೇರಿ ಹಾಗೂ ಮತ್ತಿತರ ಬಸ್ ನಿಲ್ದಾಣಗಳಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾರ್ಗಗಳಲ್ಲಿ ಬಸ್​​ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ವಿಭಾಗ ವ್ಯಾಪ್ತಿಯ ಎಲ್ಲ ಬಸ್ ಘಟಕಗಳು, ಬಸ್​​​​​​ಗಳು ಮತ್ತು ಬಸ್ ನಿಲ್ದಾಣಗಳನ್ನು ಈಗಾಗಲೇ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ. ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಿಸಿ ಸ್ಯಾನಿಟೈಸೇಷನ್ ಮಾಡಲಾಗಿರುತ್ತದೆ. ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಬಸ್​​​ಗಳನ್ನ ರಸ್ತೆಗಿಳಿಸಲಾಗುತ್ತದೆ.

ಮಾಸ್ಕ್ ಧರಿಸಿದ ಪ್ರಯಾಣಿಕರಿಗೆ ಮಾತ್ರವೇ ಬಸ್ ನಿಲ್ದಾಣಕ್ಕೆ ಪ್ರವೇಶಿಸಲು ಅನುಮತಿಸಲಾಗುತ್ತದೆ. ನಿಲ್ದಾಣದ ಪ್ರವೇಶ ದ್ವಾರದಲ್ಲಿ ಎಲ್ಲ ಪ್ರಯಾಣಿಕರಿಗೆ ಸ್ಯಾನಿಟೈಸರ್​ ನೀಡಲಾಗುತ್ತದೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಬಸ್​​​​ನಲ್ಲಿ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಆದ್ದರಿಂದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೇ ಸಂಸ್ಥೆಯ ಬಸ್​​​ಗಳಲ್ಲಿ ಸುರಕ್ಷಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ರಾಮನಗೌಡರ ತಿಳಿಸಿದ್ದಾರೆ.

ABOUT THE AUTHOR

...view details