ಧಾರವಾಡ:ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈಗಾಗಲೇ ಜಾಮೀನು ನೀಡುವಂತೆ ವಿನಯ್ ಪರ ವಕೀಲರು ವಾದ ಮಂಡಿಸಿದ್ದಾರೆ. ಅದಕ್ಕೆ ಇಂದು ಸಿಬಿಐ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ.