ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಅಡಿ ಅಭಿವೃದ್ಧಿಪಡಿಸುತ್ತಿರುವ ತೊಳನಕೆರೆ ಕಾಮಗಾರಿಯನ್ನು 4 ತಿಂಗಳಲ್ಲಿ ಪೂರ್ಣಗೊಳಿಸಿ ಉದ್ಯಾನವನ್ನು ಸಾರ್ವಜನಿಕರ ಉಪಯೋಗಕ್ಕೆ ಲೋಕಾರ್ಪಣೆ ಮಾಡಲಾಗುವುದು. 42 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿರುವ ಉಣಕಲ್ ಕೆರೆ ಕಾಮಗಾರಿ 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯ ಉಣಕಲ್ ಹಾಗೂ ತೋಳಕೆರೆಯ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿ, ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸ್ಮಾರ್ಟ್ ಸಿಟಿ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ತೋಳನಕೆರೆಗೆ ಹರಿದು ಬರುತ್ತಿದ್ದ ಚರಂಡಿ ನೀರಿನ ಶುದ್ಧೀಕರಣಕ್ಕೆ ಘಟಕ ನಿರ್ಮಿಸಲಾಗಿದೆ. ದಿನ ಒಂದಕ್ಕೆ 10 ಲಕ್ಷ ಲೀಟರ್ ಶುದ್ಧೀಕರಿಸಿದ ನೀರನ್ನು ಕೆರೆಗೆ ಬಿಡಲಾಗುತ್ತದೆ. ಮುಂದಿನ ದಿನಗಳ ಕೆರೆಯ ನೀರನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗುತ್ತದೆ ಎಂದರು.