ಹುಬ್ಬಳ್ಳಿ:ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಅಪಘಾತ ಪ್ರಮಾಣ ತಗ್ಗಿಸುವ ಹಾಗೂ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪೊಲೀಸ್ ಕಮಿಷನರೇಟ್ ಸಂಚಾರ ಮತ್ತು ಅಪರಾಧ ವಿಭಾಗವು ಕಾರ್ಯಾಚರಣೆಗೆ ಮುಂದಾಗಿದೆ. ಬೇಕಾಬಿಟ್ಟಿಯಾಗಿ ಓಡಾಡುತ್ತಿರುವ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಗೆ ಬಿಸಿ ತಟ್ಟಿದೆ.
ನಿಗದಿಪಡಿಸಿದ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ನಗರದಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾ, ವ್ಯಾನ್ಗಳ ಮೇಲೆ ಒಟ್ಟು 97 ಪ್ರಕರಣಗಳನ್ನು ದಾಖಲಿಸಿ, 11 ವಾಹನಗಳನ್ನು ಜಪ್ತಿ ಮಾಡಿ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸಿದ್ದಾರೆ.