ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಹೊರಟ ಶ್ರಮಿಕ್ ಎಕ್ಸ್‌ಪ್ರೆಸ್‌

ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿದ್ದ 1,443 ವಲಸೆ ಕಾರ್ಮಿಕರು ಶ್ರಮಿಕ್ ಎಕ್ಸ್‌ಪ್ರೆಸ್‌ ರೈಲಿನ ಮೂಲಕ ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ತೆರಳಿದರು.

By

Published : May 18, 2020, 6:44 PM IST

train facility for migrants workers
ವಲಸೆ ಕಾರ್ಮಿಕರಿಗೆ ರೈಲು ವ್ಯವಸ್ಥೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿರುವ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು ಪ್ರಯಾಣಿಸಿತು.

ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹೊರಟ ರೈಲಿನಲ್ಲಿ 1,443 ಕಾರ್ಮಿಕರಿದ್ದರು. ಬೆಳ್ಳಗ್ಗೆ 6 ಗಂಟೆಯಿಂದಲೇ 15 ವಿಶೇಷ ಕೌಂಟರ್​​​​ಗಳಲ್ಲಿ ವಲಸಿಗರ ಆರೋಗ್ಯ ತಪಾಸಣೆ ನಡೆಸಲಾಯಿತು.

ಉತ್ತರ ಪ್ರದೇಶದ ಬಸ್ತಿಗೆ ಹೊರಟ ಶ್ರಮಿಕ್ ಎಕ್ಸ್‌ಪ್ರೆಸ್‌

ಆರೋಗ್ಯ ತಪಾಸಣೆ ನಂತರ ಆರೋಗ್ಯ ಪ್ರಮಾಣ ಪತ್ರ ಹಾಗೂ ರೈಲ್ವೆ ಪ್ರಯಾಣದ ಟಿಕೆಟ್ ನೀಡಲಾಯಿತು. ನಂತರವೇ ರೈಲಿನಲ್ಲಿ ಪ್ರಯಾಣಿಸಲು ಅನುಮತಿ ಕಲ್ಪಿಸಲಾಯಿತು. ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರ ಸಂಬಂಧಿಕರು ಹಾಗೂ ಸ್ಥಳೀಯ ಮುಖಂಡರಿಗೆ ರೈಲ್ವೆ ಇಲಾಖೆ ಅಧಿಕಾರಿಗಳು ನಿಲ್ದಾಣದೊಳಗೆ ಪ್ರವೇಶ ನೀಡಲಿಲ್ಲ.

ABOUT THE AUTHOR

...view details