ಕರ್ನಾಟಕ

karnataka

ETV Bharat / state

ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಆಗ್ರಹಿಸಿ ಶೆಟ್ಟರ್ ನಿವಾಸಕ್ಕೆ ಶಿಕ್ಷಕರ ಮುತ್ತಿಗೆ - ಜಗದೀಶ್​ ಶೆಟ್ಟರ್​ ಮನೆ ಮುಂದೆ ಶಿಕ್ಷಕರು ಪ್ರತಿಭಟನೆ,

ನಗರದ ಜಗದೀಶ ಶೆಟ್ಟರ್ ನಿವಾಸಕ್ಕೆ ಮುತ್ತಿಗೆ ಹಾಕಿದ ಶಿಕ್ಷಕರು, ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವರ್ಗಾವಣೆ ಪ್ರಕ್ರಿಯೆಯನ್ನು ಪುನಃ ಪ್ರಾರಂಭಿಸುವಂತೆ ಒತ್ತಾಯಿಸಿದರು.‌

Transfer issue, Teachers protest, Teachers protest in Jagadish Shettar home front, Hubli news, Hubli latest news, ವರ್ಗಾವಣೆ ವಿಚಾರ, ಶಿಕ್ಷಕರು ಪ್ರತಿಭಟನೆ, ಜಗದೀಶ್​ ಶೆಟ್ಟರ್​ ಮನೆ ಮುಂದೆ ಶಿಕ್ಷಕರು ಪ್ರತಿಭಟನೆ, ಹುಬ್ಬಳ್ಳಿ ಸುದ್ದಿ,
ಜಗದೀಶ್ ಶೆಟ್ಟರ್ ನಿವಾಸಕ್ಕೆ ಮುತ್ತಿಗೆ ಹಾಕಿದ ಶಿಕ್ಷಕರು

By

Published : Mar 29, 2021, 12:01 PM IST

ಹುಬ್ಬಳ್ಳಿ: ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯನ್ನು ಪುನಃ ಪ್ರಾರಂಭ ಮಾಡುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಶಿಕ್ಷಕರು ಜಗದೀಶ ಶೆಟ್ಟರ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ಜಗದೀಶ ಶೆಟ್ಟರ್ ನಿವಾಸಕ್ಕೆ ಮುತ್ತಿಗೆ ಹಾಕಿದ ಶಿಕ್ಷಕರು

ನಗರದ ಜಗದೀಶ ಶೆಟ್ಟರ್ ನಿವಾಸಕ್ಕೆ ಮುತ್ತಿಗೆ ಹಾಕಿದ ಶಿಕ್ಷಕರು, ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವರ್ಗಾವಣೆ ಪ್ರಕ್ರಿಯೆಯನ್ನು ಪುನಃ ಪ್ರಾರಂಭಿಸುವಂತೆ ಒತ್ತಾಯಿಸಿದರು.‌

ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರಾಜ್ಯಾಧ್ಯಕ್ಷ ಅಶೋಕ ಸಜ್ಜನರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಸದಸ್ಯರು, ಶಿಕ್ಷಕ ಎಲ್.​ಐ. ಲಕ್ಕಮ್ಮನವರ ಸೇರಿದಂತೆ ಐವತ್ತಕ್ಕೂ ಹೆಚ್ಚು ಶಿಕ್ಷಕರು ಭಾಗಿಯಾಗಿದ್ದರು.

ABOUT THE AUTHOR

...view details