ಹುಬ್ಬಳ್ಳಿ: ಇಂದಿನಿಂದ ರಾಜ್ಯಾದ್ಯಂತ 3 ಅನ್‌ಲಾಕ್ ಆರಂಭವಾಗಿದ್ದು ಸಾರಿಗೆ ಬಸ್‌ಗಳಲ್ಲಿ ಶೇ100 ರಷ್ಟು ಸೀಟ್‌ಗೆ ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಸೀಟುಗಳ ಭರ್ತಿಗೆ ಅವಕಾಶ ನೀಡುರುವ ಬೆನ್ನಲ್ಲೇ ಹುಬ್ಬಳ್ಳಿಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೊರಡುವ ಬಸ್‌ಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲಾಗಿದೆ.
ಹುಬ್ಬಳ್ಳಿ ಗ್ರಾಮಾಂತರ ಹಾಗೂ ನಗರ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಿದ್ದು, ಹುಬ್ಬಳ್ಳಿಯಿಂದ ಬೆಂಗಳೂರು, ದಾವಣಗೆರೆ, ಹಾವೇರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ ಹಲವೆಡೆ ಬಸ್ ಸಂಚಾರ ಆರಂಭವಾಗಿದೆ.