ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ 96 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಮೇ. 24ರವರೆಗೆ ನಮ್ಮ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದವರು ಸೇರಿ 109 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ಸೋಂಕಿತರು ತಮ್ಮ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿದ್ದಾರೆ.