ಹುಬ್ಬಳ್ಳಿ:ಅನಾರೋಗ್ಯದಿಂದ ನರಳಾಡುತ್ತಿದ್ದ ಮಂಗಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ವೈದ್ಯರು ಮಾನವೀಯತೆ ಮೆರೆದಿದ್ದಾರೆ.
ಮಂಗನಿಗೆ ಟ್ರೀಟ್ಮೆಂಟ್ ಮಾಡಿ ಮಾನವೀಯತೆ ಮೆರೆದ ವೈದ್ಯಾಧಿಕಾರಿ - monkey treatment news
ಸರ್ಕಾರಿ ಆಸ್ಪತ್ರೆಗಳಲ್ಲಿ ಮನುಷ್ಯರಿಗೆ ಚಿಕಿತ್ಸೆ ನೀಡುವುದು ಸಾಮಾನ್ಯ. ಆದರೆ, ಇಲ್ಲೊಂದು ಆಸ್ಪತ್ರೆಯಲ್ಲಿ ಕೋತಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಮಂಗನಿಗೆ ಟ್ರೀಟ್ಮೆಂಟ್
ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ಮಂಗವೊಂದು ತೀವ್ರ ಜ್ವರದಿಂದ ನರಳುತ್ತಿತ್ತು. ಇದನ್ನು ಗಮನಿಸಿದ ಯುವಕರು ಅಲ್ಲೆ ಪಕ್ಕದಲ್ಲಿದ್ದ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಆರೋಗ್ಯ ಕೇಂದ್ರದ ಡಾ. ಸುರೇಶ ಕಳಸಣ್ಣವರ್ ಎಂಬ ವೈದ್ಯಾಧಿಕಾರಿಯಿಂದ ಪ್ರಾಥಮಿಕ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಬಳಿಕ ಅವರೇ ಹೆಚ್ಚಿನ ಚಿಕಿತ್ಸೆಗಾಗಿ ತಮ್ಮ ವಾಹನವನ್ನು ಕೊಟ್ಟು ಪಶು ವೈದ್ಯರ ಬಳಿ ಕಳುಹಿಸಿಕೊಟ್ಟಿದ್ದಾರೆ. ವೈದ್ಯರ ಕಾರ್ಯಕ್ಕೆ ಯುವಕರು ಕೃತಜ್ಞತೆ ಸಲ್ಲಿಸಿದ್ದಾರೆ.