ಧಾರವಾಡ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ನಗರದ ಶ್ರೀನಿವಾಸ ಮತ್ತು ಗಣೇಶ ನಗರದ ಫಯೂಮ್ ಎಂಬುವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರು, ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಅಪ್ರಾಪ್ತೆ ಕೂಡ ಧಾರವಾಡ ನಗರದವರೇ ಆಗಿದ್ದು, ಆರೋಪಿಗಳು ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ತಿಳಿದು ಬಂದಿದೆ.