ಹುಬ್ಬಳ್ಳಿ:ಗ್ರಾಪಂ ಸದಸ್ಯ ದೀಪಕ್ ಪಟದಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 4 ರಂದು ಗ್ರಾಪಂ ಸದಸ್ಯ ದೀಪಕ್ ಪಟದಾರಿ ಅವರನ್ನು ಹುಬ್ಬಳ್ಳಿ ತಾಲೂಕಿನ ರಾಯನಾಳ ಬಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಇನ್ನು ದೀಪಕ್ ಹತ್ಯೆಗೆ ಸರಿಯಾದ ನ್ಯಾಯ ಸಿಕ್ಕಿಲ್ಲ ಹಾಗಾಗಿ ಈ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡುವಂತೆ ಸಂಬಂಧಿಕರು ಆಗ್ರಹಿಸಿದರು. ಅದೇ ರೀತಿ ದೀಪಕ್ ಕೊಲೆ ಪ್ರಕರಣವನ್ನ ಸಿಐಡಿಗೆ ವರ್ಗಾವಣೆಯನ್ನು ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಾಗಲಕೋಟೆ ಜಿಲ್ಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.