ಧಾರವಾಡ: ಬೈಕ್‌ಗೆ ಅಪರಿಚಿತ ವಾಹನವೊಂದು ಹಿಟ್ ಆ್ಯಂಡ್ ರನ್( ಗುದ್ದೋಡಿದ) ಪರಿಣಾಮ ಬೈಕ್ನಲ್ಲಿದ್ದ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಇಂದು ಸಂಭವಿಸಿದೆ.
ಹಿಟ್ ಆ್ಯಂಡ್ ರನ್: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ - dharwad latest crime news
ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಸಂಭವಿಸಿದೆ.
ಬೈಕ್ ಸವಾರರಿಬ್ಬರ ಸಾವು
ಲಕ್ಣ್ಮಣ (28) ಹಾಗೂ ಮೈಲಾರಿ (48) ಮೃತರು. ಮೃತರಿಬ್ಬರು ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದವರಾಗಿದ್ದಾರೆ. ಧಾರವಾಡದಿಂದ ಐಯಟ್ಟಿ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಡಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.