ಧಾರವಾಡ: ಕೊರೊನಾ ಶಂಕಿತರ ಗಂಟಲು ದ್ರವ ಪರೀಕ್ಷೆಗೆ ಹೋಗಿದ್ದ ನಾಲ್ಕು ಪ್ರಕರಣಗಳಲ್ಲಿ ಇಬ್ಬರ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.
ಧಾರವಾಡದಲ್ಲಿ ಮತ್ತೆರಡು ಕೊರೊನಾ ಶಂಕಿತರ ವರದಿ ನೆಗೆಟಿವ್: ಆರೋಗ್ಯ ಇಲಾಖೆ ಸ್ಪಷ್ಟನೆ - ಧಾರವಾಡ: ಕೊರೊನಾ ಶಂಕಿತರ ವರದಿ ನೆಗೆಟಿವ್
ಧಾರವಾಡದಲ್ಲಿ ಕೊರೊನಾ ಶಂಕಿತರ ಗಂಟಲು ದ್ರವ ಪರೀಕ್ಷೆಗೆ ಹೋಗಿದ್ದ ನಾಲ್ಕು ಪ್ರಕರಣಗಳಲ್ಲಿ ಇಬ್ಬರ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಧಾರವಾಡದಲ್ಲಿ ಮತ್ತೆರೆಡು ಕೊರೊನಾ ಶಂಕಿತರ ವರದಿ ನೆಗೆಟಿವ್: ಆರೋಗ್ಯ ಇಲಾಖೆ ಸ್ಪಷ್ಟನೆ
ಕಳೆದ ಭಾನುವಾರ ಒಟ್ಟು ಶಂಕಿತ ನಾಲ್ಕು ಪ್ರಕರಣಗಳ ಗಂಟಲು ದ್ರವ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ ಎರಡು ವರದಿಗಳು ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.
ಇನ್ನೆರಡು ವರದಿಗೆ ಕಾಯಲಾಗುತ್ತಿದ್ದು, ಈವರೆಗೆ ಜಿಲ್ಲೆಯಲ್ಲಿ 362 ಜನರ ಮೇಲೆ ನಿಗಾ ಇರಿಸಲಾಗಿದೆ. ಅವರಲ್ಲಿ 249 ಜನರನ್ನು ಹೋಂ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ.