ಧಾರವಾಡ:ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆಯೊಬ್ಬರು ಗಾಯಗೊಂಡ ಘಟನೆ ಧಾರವಾಡ ಬೈಪಾಸ್‌ನ ಯರಿಕೊಪ್ಪ ಬಳಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ನಂ. 4ರ ಬೈಪಾಸ್‌ನಲ್ಲಿ ಬೆಳಗಿನ ಜಾವ ಘಟನೆ ನಡೆದಿದ್ದು, ಬೆಳಗಾವಿಯಿಂದ ಹೊಸಪೇಟೆಯತ್ತ ಕ್ಯಾಂಟರ್ ಹೊರಟಿತ್ತು. ಮೃತರ ವಿವರ ತಿಳಿದು ಬಂದಿಲ್ಲ.
ಬೆಳಗಾವಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ. ಇಬ್ಬರು ಅಸುನೀಗಿದ್ದು, ಓರ್ವ ಮಹಿಳೆ ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಭೂ ವಿವಾದದಿಂದ ಎರಡು ಗುಂಪುಗಳ ನಡುವೆ ಮಾರಾಮಾರಿ: ಗುಂಡು ಹಾರಿಸಿಕೊಂಡ ವಿಡಿಯೋ ವೈರಲ್