ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಕಾಡಸಿದ್ದೇಶ್ವರ ಕಾಲೇಜ್ ಬಳಿ ಸಂಭವಿಸಿದೆ.
ಬೈಕ್ನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸಾವಿಗೀಡಾಗಿದ್ದಾರೆ. ಯಲ್ಲಾಪುರ ಓಣಿಯ ರಾಜಸಾಬ ಮುಲ್ಲಾ, ಖಾಜಾಸಾಬ ಮುಲ್ಲಾ ಮೃತರು. ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಇವರು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.