ಹುಬ್ಬಳ್ಳಿ: ವೇಗವಾಗಿ ಚಲಿಸುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉಣಕಲ್ ಕೆರೆ ಬಳಿಯ ಪ್ರೆಸಿಡೆಂಟ್ ಹೋಟೆಲ್ ಮುಂಭಾಗ ಸಂಭವಿಸಿದೆ.
ಹುಬ್ಬಳ್ಳಿಯಲ್ಲಿ ರಸ್ತೆ ಡಿವೈಡರ್ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ದಾರುಣ ಸಾವು - Hubli accident News
ಯುವಕರು ಬೈಕ್ನಲ್ಲಿ ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಇಬ್ಬರು ಯುವಕರು ಸಹ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಅಪಘಾತ
ವೇಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಇಬ್ಬರು ಯುವಕರೂ ಸಹ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮೃತ ಯುವಕರ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆ ಬಗ್ಗೆ ಮಾಹಿತಿ ಪಡೆದ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕರನ್ನು ಆಸ್ಪತ್ರೆಗೆ ರವಾನಿಸಿದ್ದರೂ ಸಹ ಪ್ರಯೋಜನವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Aug 26, 2021, 1:46 PM IST