ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಇಬ್ಬರು ಮನೆಗಳ್ಳರ ಬಂಧನ: 25ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ - ಮನೆಗಳ್ಳರ ಬಂಧನ

ಹುಬ್ಬಳ್ಳಿಯಲ್ಲಿ ಇಬ್ಬರು ಮನೆಗಳ್ಳರ ಬಂಧನ. 91 ಗ್ರಾಂ ಚಿನ್ನ, 5 ಕೆ.ಜಿ ಬೆಳ್ಳಿ ಹಾಗೂ ಒಂದು ಕಾರು ವಶ.

Two house thieves arrested in Hubli
ಹುಬ್ಬಳ್ಳಿಯಲ್ಲಿ ಇಬ್ಬರು ಮನೆಗಳ್ಳರ ಬಂಧನ

By

Published : Oct 16, 2022, 11:40 AM IST

ಹುಬ್ಬಳ್ಳಿ:ಕುಖ್ಯಾತ ಇಬ್ಬರು ಮನೆಗಳ್ಳರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಬ್ಬರೂ ಬೆಳಗಾವಿ ವೈಲವ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ಕೇಶ್ವಾಪುರ ಪೊಲೀಸ್​ ಠಾಣಾ ವ್ಯಾಪ್ತಿಯ ಹೇಮಂತ ನಗರ ಗಣಪತಿ ಗುಡಿ ಹತ್ತಿರ ಒಂದು ಮನೆ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

ಈ ವೇಳೆ ಆರೋಪಿತರಿಬ್ಬರು ಸೇರಿ ಹುಬ್ಬಳ್ಳಿ, ಧಾರವಾಡ, ನಿಪ್ಪಾಣಿ, ಸಂಕೇಶ್ವರ, ಬಾಗಲಕೋಟೆ ಸೇರಿದಂತೆ 25ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿವೆ. ಬಂಧಿತರಿಂದ 91ಗ್ರಾಂ ಚಿನ್ನ, 5 ಕೆ.ಜಿ ಬೆಳ್ಳಿ ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ಯುದ್ಧಕ್ಕಾಗಿ ಯುವಕರಿಗೆ ರಷ್ಯಾ ತರಬೇತಿ: ಸ್ವಯಂ ಸೇವಕ ಸೈನಿಕರಿಂದಲೇ ದಾಳಿ.. 11 ಯೋಧರ ಹತ್ಯೆ

ABOUT THE AUTHOR

...view details