ಹುಬ್ಬಳ್ಳಿ:ವೀಕೆಂಡ್ ಕರ್ಫ್ಯೂ ಹಿನ್ನೆಲೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತಕ್ಕೀಡಾಗಿದ್ದ ಬೈಕ್ ಸವಾರರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಬೈಕ್ ಅಪಘಾತ.. ತಮ್ಮದೇ ಕಾರಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ - ಬೈಕ್ ಅಪಘಾತ
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಕಾರಿಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅದೇ ಮಾರ್ಗವಾಗಿ ಬರುತ್ತಿದ್ದ ಧಾರವಾಡ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಬೈಕ್ ಸವಾರರಿಬ್ಬರನ್ನು ತಮ್ಮದೇ ಕಾರಿನಲ್ಲಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದು ನೆರವಾಗಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಬೈಕ್ ಅಪಘಾತ
ಉಣಕಲ್ ಕೆರೆಯ ಎದುರಿಗಿರುವ ಪ್ರೆಸಿಡೆಂಟ್ ಹೊಟೇಲ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಕಾರಿಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅದೇ ಮಾರ್ಗವಾಗಿ ಬರುತ್ತಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಅವರು ಗಾಯಗೊಂಡ ಬೈಕ್ ಸವಾರರಿಬ್ಬರನ್ನು ತಮ್ಮದೇ ಕಾರಿನಲ್ಲಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಸಹಾಯ ಮಾಡಿದ್ದಾರೆ.