ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ ಇಬ್ಬರಲ್ಲಿ ಕೊರೊನಾ ದೃಢ: 46ಕ್ಕೆ ಏರಿದ ಸೋಂಕಿತರ ಸಂಖ್ಯೆ

ಧಾರವಾಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಇಂದು ಸಹ ಜಿಲ್ಲೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

two more corona cases confirmed in Dharwad: Total cases raised to 46
ಧಾರವಾಡದಲ್ಲಿಂದು ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆ: 46ಕ್ಕೆ ಏರಿಕೆಯಾದ ಸೋಂಕಿತರು

By

Published : May 30, 2020, 7:44 PM IST

ಧಾರವಾಡ:ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-2807 (26 ವರ್ಷ, ಮಹಿಳೆ) ಗೆ ಪಿ-1123 ಅವರ ಸಂಪರ್ಕದಿಂದ ಸೋಂಕು ತಗುಲಿದೆ. ಪಿ-2808 ( 27 ವರ್ಷದ ಮಹಿಳೆ) ಇವರು ಮಹಾರಾಷ್ಟ್ರ ರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳು ಈಗಾಗಲೇ ಕ್ವಾರಂಟೈನ್​​ನಲ್ಲಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಅಲ್ಲದೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದವರು ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details