ಹುಬ್ಬಳ್ಳಿ:ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ದುಷ್ಕರ್ಮಿಗಳು ಅಟ್ಟಹಾಸ ಮುಂದುವರೆಸಿದ್ದಾರೆ. ನಿನ್ನೆ ತಡರಾತ್ರಿ ಎರಡು ಪ್ರತ್ಯೇಕ ಚೂರಿ ಇರಿತ ಪ್ರಕರಣಗಳು ನಡೆದಿವೆ.
ವಾಣಿಜ್ಯ ನಗರಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: 2 ಪ್ರತ್ಯೇಕ ಚೂರಿ ಇರಿತ ಪ್ರಕರಣ ದಾಖಲು - Hubli knife stab case
ಹುಬ್ಬಳ್ಳಿಯಲ್ಲಿ ನಿನ್ನೆ ತಡರಾತ್ರಿ ಎರಡು ಪ್ರತ್ಯೇಕ ಚೂರಿ ಇರಿತ ಪ್ರಕರಣಗಳು ನಡೆದಿವೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ವಾಣಿಜ್ಯ ನಗರಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕನಿಗೆ ಚೂರಿ ಇರಿತ
ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೋಯೆಬ್ ಅಬ್ಬನ್ನವರ (24) ಎಂಬ ಯುವಕನಿಗೆ ಹಿಂಭಾಗದಲ್ಲಿ ಚೂರಿ ಇರಿಯಲಾಗಿದೆ. ಇತ್ತ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ದಾಖಲಾಗಿದೆ. ಮಾಧವ ನಗರದಲ್ಲಿ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.